LatestMysore

ಹರವೆ ಬಸವೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮ

ಹುಣಸೂರು (ಸ್ವಾಮಿಗೌಡ  ಹಿರಿಕ್ಯಾತನಹಳ್ಳಿ): ತಾಲೂಕಿನ ಹರವೆ ವಲಯದ ಬಸವೇಶ್ವರ ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಮಹದೇವ  ಮಾತನಾಡಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಸಾಲ ಸೌಲಭ್ಯಗಳನ್ನು ಮಾತ್ರ ನೀಡದೆ ನಾಡಿನ ಪರಿಸರ ಸಂರಕ್ಷಣೆಯ ಬಗ್ಗೆ ಮಹತ್ತರವಾದ ಜವಾಬ್ದಾರಿಯ ಕೆಲಸ ಕಾರ್ಯಗಳನ್ನು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂಬ ಮಾಹಿತಿಯನ್ನು ನೀಡಿದರು.

19-20ನೇ ಶತಮಾನದ ರಾಜರುಗಳ ಆಳ್ವಿಕೆಯ ಕಾಲದಲ್ಲಿ ಅವರುಗಳು ಪರಿಸರದ ಬಗ್ಗೆ ತೆಗೆದುಕೊಂಡ ಕ್ರಮಗಳು ಅರಣ್ಯ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ  ಕೃಷಿ ಮೇಲ್ವಿಚಾರಕ ಅಣ್ಣಪ್ಪ ,ಸೇವಾಪ್ರತಿನಿಧಿ ಸಮಂತ್ ಶಾಲೆಯ ಸಹ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

admin
the authoradmin

Leave a Reply