ಮೈಸೂರು: ಹಿಂದುಸ್ತಾನ್ ಕಾಲೇಜಿನಲ್ಲಿ 2026–27ನೇ ಸಾಲಿನ ವಿದ್ಯಾರ್ಥಿ ಪರಿಷತ್‌ನ ಪದಗ್ರಹಣ ಸಮಾರಂಭ ನಡೆಯಿತು.
ಹಿಂದುಸ್ತಾನ್ ಕಾಲೇಜಿನ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪರಮೇಶ ಕೆ. ಅವರು ನಾಡಗೀತೆಯನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾದ ಫೈಜಲ್ ಖಾನ್ ಅವರು ಸ್ವಾಗತ ಭಾಷಣ ಮಾಡಿದರು. ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
2025–26ನೇ ಸಾಲಿನ ವಿದ್ಯಾರ್ಥಿ ಪರಿಷತ್‌ನ ವಾರ್ಷಿಕ ವರದಿಯನ್ನು ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕು. ತೃಪ್ತಿ ಅವರು ಮಂಡಿಸಿದರು. ಬಳಿಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜೆ. ಪ್ರಿಯಾ ಅವರು ಅಧ್ಯಕ್ಷೀಯ ಮಾತುಗಳೊಂದಿಗೆ ನೂತನ ವಿದ್ಯಾರ್ಥಿ ಪರಿಷತ್ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಡಾ. ಕೆ. ಮಂಟೇಲಿಂಗು ಅವರು ವಿದ್ಯಾರ್ಥಿ ಪರಿಷತ್ ಸದಸ್ಯರಿಗೆ ಬ್ಯಾಡ್ಜ್‌ಗಳನ್ನು ಪ್ರದಾನ ಮಾಡಿದರು. ನೂತನ ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾದ ಶ್ರೀ ಫೈಜಲ್ ಖಾನ್ ಹಾಗೂ ಉಪಾಧ್ಯಕ್ಷರಾದ ಶ್ರೀ ದೀಕ್ಷಿತ್ ಆರ್. ಅವರು ಸ್ವೀಕೃತಿ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಕೆ.ಮಂಟೇಲಿಂಗು ಅವರು ಮಾತನಾಡುತ್ತಾ ವಿದ್ಯಾರ್ಥಿ ಪರಿಷತ್ ಎಂಬುದು ಕೇವಲ ನಾಯಕತ್ವದ ಹುದ್ದೆಯಲ್ಲ; ಅದು ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ, ಶಿಸ್ತು, ನಾಯಕತ್ವ ಗುಣ, ಸಹಕಾರ ಮನೋಭಾವ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯ ಜೊತೆಗೆ ಕಾಲೇಜಿನ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿ ಪರಿಷತ್‌ನ ಸಾಂಸ್ಕೃತಿಕ ಕಾರ್ಯದರ್ಶಿ ಕು. ಜ್ಞಾನೇಶ್ವರಿ ಜೆ. ಅವರು ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಶ್ರೀ ದುಶ್ಯಂತ್ ಟಿ. ರಾಜ್ ಅವರು ಕಾರ್ಯಕ್ರಮದ ನಿರೂಪಣೆ ಹಾಗೂ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿದ್ದರು. ಕಾರ್ಯಕ್ರಮದ ಆಯೋಜಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳು ಹಾಗೂ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ ಶಿವಕುಮಾರ್ ಆರ್, ಉಪಸ್ಥಿತರಿದ್ದರು.
2026–27ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಗಣ್ಯರು, ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.








