LatestMysore

ಹೊಸೂರಿನಲ್ಲಿ ಯಶಸ್ವಿಯಾಗಿ ನಡೆದ  2100ನೇ ಮದ್ಯವರ್ಜನ ಶಿಬಿರ… ಪಾನಮುಕ್ತರಾದರೆ ನೆಮ್ಮದಿಯ ಜೀವನ

 ಸಾಲಿಗ್ರಾಮ(ಸಂಘಟನೆ ಮಂಜುನಾಥ್): ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಅಖಿಲ ಕರ್ನಾಟಕ ಜನವೇದಿಕೆ ಟ್ರಸ್ಟ್ ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಆಶ್ರಯದಲ್ಲಿ 2100ನೇ ಮದ್ಯವರ್ಜನ ಶಿಬಿರ ಸಾಲಿಗ್ರಾಮದ ಹೊಸೂರು ಗ್ರಾಮದಲ್ಲಿ ಯಶಸ್ವಿಯಾಗಿ ನಡೆಯಿತು

ಈ ಶಿಬಿರದ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಗಾವಡಗೆರೆ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ ಆಶೀರ್ವಚನ ನೀಡಿದರು.

ಕೆ ಆರ್ ನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಹಂದನಹಳ್ಳಿ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಪ್ರಾದೇಶಿಕ ನಿರ್ದೇಶಕರಾದ ಯೋಗೀಶ್  ಅವರು ಯೋಜನೆ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಆರಂಭ ಹಾಗೂ ಶಿಬಿರಾರ್ಥಿಗಳಿಗೆ ಮತ್ತು ಕುಟುಂಬ ಸದಸ್ಯರಿಗೆ ಪಾನಮುಕ್ತ ನೆಮ್ಮದಿಯ ದಾಂಪತ್ಯ ಜೀವನದ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ವೇಳೆ ಕೆ ಆರ್ ನಗರ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಮಮತಾ ರಾವ್ , ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿ  ಬಾಲಮನೋಹರ್ ಮಾತನಾಡಿ ಶಿಬಿರದ ಬಗ್ಗೆ ಮಾಹಿತಿ ನೀಡಿದರಲ್ಲದೆ, ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಕಿವಿಮಾತುಗಳನ್ನು ಹೇಳುವ ಮೂಲಕ ಪಾನಮುಕ್ತ ಬದುಕಿಗೆ ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಸಾಲಿಗ್ರಾಮ ತಾಲೂಕು ಯೋಜನಾಧಿಕಾರಿಯವರಾದ  ಉಮೇಶ್ ಪೂಜಾರಿ,, ಜನಜಾಗೃತಿ ವೇದಿಕೆಯ ಸದಸ್ಯರು, ಶಿಬಿರಾರ್ಥಿಗಳು ಮತ್ತು ಗ್ರಾಮದ ಮುಖಂಡರು ಭಾಗವಹಿಸಿದ್ದರು

admin
the authoradmin

Leave a Reply