ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸರ್ವ ಸದಸ್ಯರ ಸಭೆ ಇತ್ತೀಚೆಗೆ ಪಟ್ಟಣದ ಬಿಆರ್ ಸಿ ಕೇಂದ್ರದಲ್ಲಿ ನಡೆದು, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ದೊಡ್ಡ ಹೆಜ್ಜೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ಎಚ್.ಕೆ. ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಕೊತ್ತೇಗಾಲ ಪ್ರೌಢಶಾಲೆಯ ಶಿವಣ್ಣ, ಖಜಾಂಚಿಯಾಗಿ ಅರಸು ಕಲ್ಲಳ್ಳಿ ಪ್ರೌಢಶಾಲೆಯ ಮಮತಾ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಮುಳ್ಳೂರು ಪ್ರೌಢಶಾಲೆಯ ರಮೇಶ್.ಎಸ್ ಅವರನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಪದಾಧಿಕಾರಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಾಳನಾಯಕ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಹೇಮಲತಾ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಡಿ.ಎಂ.ರವಿ ಅವರು ಅಭಿನಂದಿಸಿದರು.
ಇದೇ ವೇಳೆ ತಾಲೂಕು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಕೆ. ಜಗದೀಶ್ ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಈ ಸಂದರ್ಭ ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಜರಿದ್ದರು. ಈ ಸಂದರ್ಭ ಸಂಘದ ನೂತನ ಅಧ್ಯಕ್ಷ ರಮೇಶ್ ಎಚ್.ಕೆ .ಅವರು ಮಾತನಾಡಿ, ತಮ್ಮ ಅಧಿಕಾರದ ಅವಧಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು








