ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಚ್.ಕಾಳನಾಯಕ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಬಿಇಒ ಆಗಿದ್ದ ಮಹದೇವ್ ಎಸ್.ಪಿ. ಅವರಿಗೆ ಯಾವುದೇ ಸ್ಥಳ ನಿಯೋಜನೆಗೊಳಿಸದೆ ಸರಕಾರ ವರ್ಗಾವಣೆ ಗೊಳಿಸಿದೆ.
ಮೈಸೂರಿನ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾಳನಾಯಕ ಅವರನ್ನು ಹುಣಸೂರಿಗೆ ವರ್ಗಾಯಿಸಲಾಗಿದೆ. ಈ ಹಿಂದೆ ಸೋಮವಾರಪೇಟೆ, ಎಚ್.ಡಿ.ಕೋಟೆ ತಾಲೂಕಿನಲ್ಲಿ ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಶೈಕ್ಷಣಿಕ ಪ್ರಗತಿಗೆ ಆದ್ಯತೆ: ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಹಾಗೂ ಮುಂಬರುವ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮೊದಲ ಸ್ಥಾನಗಳಿಸುವ ನಿಟ್ಟಿನಲ್ಲಿ ಎಲ್ಲರ ವಿಶ್ವಾಸದೊಂದಿಗೆ ಸರಕಾರದ ಎಂಟು ಗುರಿಗಳೊಂದಿಗೆ ಕಾರ್ಯ ನಿರ್ವಹಿಸುವೆ. ಮೇ 18ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಎರಡನೇ ಹಂತದ ಪರೀಕ್ಷೆಗೆ ತಾಲೂಕಿನಿಂದ 335 ಮಕ್ಕಳು ಪರೀಕ್ಷೆ ಬರೆಸಲಾಗುವುದು ಹಾಗೂ ಇವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು, ಇವರು ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದವರು.
ಇವರ ವಿದ್ಯಾಭ್ಯಾಸ ಹಿರೀಕ್ಯಾತನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ಹರವೆ ಗ್ರಾಮದಲ್ಲಿ ಮಾಧ್ಯಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿ ಸರ್ಕಾರಿ ಶಾಲೆಗಳಲ್ಲಿ ಓದಿ ಸರ್ಕಾರಿ ನೌಕರಿ ಪಡೆದಿದ್ದರು








