ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ಧಾರ್ಮಿಕ ಕಾರ್ಯಕ್ರಮ ನಡೆಸುವ ಹಿಂದೆ ಒಂದು ಗ್ರಾಮದ ಇತಿಹಾಸ ಇರುತ್ತದೆ ಆದ್ದರಿಂದ ಎಲ್ಲರೂ ಪಾಲ್ಗೊಳ್ಳುವುದು ಮುಖ್ಯ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.
ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದಲ್ಲಿ ಮಹದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಾರ್ವಜನಿಕರಿಗೆ ಏರ್ಪಡಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೆರೆದಿದ್ದ ಭಕ್ತ ಸಮೂಹಕ್ಕೆ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಈ ವೇಳೆ ಮಾತನಾಡಿದ ಅವರು ಪರಂಪರೆ, ಸಂಸ್ಕೃತಿ ಮತ್ತು ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಏಕತೆ, ಶಾಂತಿ ಹಾಗೂ ಸಹಬಾಳ್ವೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಇಂತಹ ಜಾತ್ರಾ ಮಹೋತ್ಸವಗಳು ಜನರನ್ನು ಒಗ್ಗೂಡಿಸುವ ಮಹತ್ವದ ವೇದಿಕೆಗಳಾಗಿವೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ತಾಲೂಕು ಜೆಡಿಎಸ್ ಮುಖಂಡ ಹರವೆ ಶ್ರೀಧರ್, ಜೆಡಿಎಸ್ ಮುಖಂಡರಾದ ಸತೀಶ್ ಪಾಪಣ್ಣ, ಬಿಳಿಕೆರೆ ಮಧು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವಣ್ಣ, ಯಜಮಾನ್ ರಾಜಣ್ಣ ವಿಜಯ್ ಹಾಗೂ ಪಂಚಾಯತ್ ಸದಸ್ಯರು ನೂರಾರು ಭಕ್ತರು ಹಾಜರಿದ್ದರು.








