ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಎಲ್ಲಿ ಎಂಬ ಪ್ರಶ್ನೆಗೆ ಸಿಕ್ತು ಉತ್ತರ.. ಖುಷಿಯಾದ ಕ್ರಿಕೆಟ್ ಪ್ರೇಮಿಗಳು!

ಬೆಂಗಳೂರು: ಬೆಂಗಳೂರಿನಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳೇ ನಡೆಯಲ್ಲ ಎಂಬ ಸುದ್ದಿಗಳು ಹರಿದಾಡುತ್ತಿದ್ದರಿಂದ ಕ್ರಿಕೆಟ್ ಪ್ರೇಮಿಗಳು ನಿರಾಸೆಗೊಂಡಿದ್ದವು, ಇದೀಗ ಬರೀ ಐಪಿಎಲ್ ಪಂದ್ಯಗಳು ಮಾತ್ರವಲ್ಲದೆ ಉದ್ಘಾಟನಾ ಪಂದ್ಯವೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತದೆ ಎಂಬ ಸುದ್ದಿ ಬಂದಿದ್ದು ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಸಂತಸ ತಂದಿದೆ.
ಐಪಿಎಲ್ ಕ್ರಿಕೆಟ್ ಗಳನ್ನು ಹತ್ತಿರದಿಂದ ನೋಡಿ ಸಂಭ್ರಮಿಸಬೇಕೆಂದು ಬಯಸುವ ಲಕ್ಷಾಂತರ ಮಂದಿಯಿದ್ದು, ಇಂತಹ ಕ್ರಿಕೆಟ್ ಪ್ರೇಮಿಗಳಿಗೆ ಈ ಹಿಂದೆ ನಡೆದ ಕಾಲ್ತುಳಿತ ಪ್ರಕರಣ ಬೇಸರ ತಂದಿದ್ದಂತು ನಿಜ. ಇದಕ್ಕೆ ಕಾರಣಗಳು ಹಲವಾರು ಇರಬಹುದು. ಆದರೆ ಕ್ರಿಕೆಟ್ ಆಟಗಾರರನ್ನು ನೋಡಲೆಂದೇ ಕ್ರಿಕೆಟ್ ನಡೆಯುವ ಸ್ಟೇಡಿಯಂಗೆ ಹೋಗುವ ಅಭಿಮಾನಿಗಳಿಗೆ ಕೊರತೆಯಿಲ್ಲ. ಅದರಲ್ಲೂ ಬೆಂಗಳೂರಿನಲ್ಲಿ ಐಪಿಎಲ್ ನಡೆಯುತ್ತದೆ ಎಂದರೆ ಜನ ಕಿಕ್ಕಿರಿದು ನೆರೆಯುತ್ತಾರೆ. ಈ ವೇಳೆ ಟಿಕೆಟ್ ಸಿಗದೆ ನಿರಾಸೆ ಪಡುವವರ ಸಂಖ್ಯೆಯೇ ಹೆಚ್ಚಾಗಿರುತ್ತದೆ.

ಹೀಗಿರುವಾಗ ಬೆಂಗಳೂರಿನಲ್ಲಿ ಕ್ರಿಕೆಟ್ ನಡೆಯುವುದೇ ಇಲ್ಲ ಎಂದಾಗ ಅಭಿಮಾನಿಗಳು ಆಕ್ರೋಶಗೊಂಡಿರುವುದು ಇದೆ. ತದನಂತರ ಸರ್ಕಾರ ಮಧ್ಯೆಪ್ರವೇಶಿಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯಲೇ ಬೇಕೆಂದು ಆಗ್ರಹಿಸಿದ್ದನ್ನು ನಾವು ನೋಡಿದ್ದೇವೆ. ಇದೆಲ್ಲದರ ನಡುವೆ ಮೈಸೂರಿನಲ್ಲಿ ಮಾತನಾಡಿರುವ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಕ್ರಿಕೆಟ್ ಅಭಿಮಾನಿಗಳು ಅದರಲ್ಲೂ ಆರ್ ಸಿಬಿ ಫ್ಯಾನ್ಸ್ ಗೆ ಬೆಂಗಳೂರಿನಲ್ಲಿ ಉದ್ಘಾಟನಾ ಐಪಿಎಲ್ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಮ್ ಗ್ರೌಂಡ್‌ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತವೆ ಎಂಬ ಮಾಹಿತಿ ನೀಡಿದ್ದಾರೆ







