Job NewsLatest

ನೀವು ಅರ್ಜಿ ಸಲ್ಲಿಸಬಹುದು… ಸಹಾಯಕ ತಾಂತ್ರಿಕ ವ್ಯವಸ್ಥಾಪಕ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇದೆ

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದೆ ಅರ್ಜಿ ಸಲ್ಲಿಸಿ…

ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ  ಹೊಂದಿರಬೇಕು. ಕನಿಷ್ಠ 01 ವರ್ಷ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.

ಆಸಕ್ತರು ಅಗತ್ಯ ದಾಖಲಾತಿಗಳು ಹಾಗೂ ತಮ್ಮ ಬಯೋಡೇಟಾದೊಂದಿಗೆ ಜೂ. 6 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ 208 ಮತ್ತು 209, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. 

ಕಾರ್ಯಕರ್ತೆ ಸಹಾಯಕಿಯರ ಹುದ್ದೆ ಖಾಲಿಯಿದೆ ಅರ್ಜಿ ಸಲ್ಲಿಸಿ

ದೊಡ್ಡಬಳ್ಳಾಪುರ ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 09 ಅಂಗನವಾಡಿ ಕಾರ್ಯಕರ್ತೆ ಮತ್ತು 84 ಸಹಾಯಕಿ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ಆಯ್ಕೆ ಮಾಡಲು ಅಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಜೂ. 30 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 080-27625228 ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಎ.ಪಿ.ಎಂ.ಸಿ ಬಿಲ್ಡಿಂಗ್ ಒಳಾವರಣ, ದೊಡ್ಡಬಳ್ಳಾಪುರ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಳಿಸಿದ್ಧಾರೆ.

ದೇವನಹಳ್ಳಿ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ

ದೇವನಹಳ್ಳಿ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಮತ್ತು 58 ಸಹಾಯಕಿ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ಆಯ್ಕೆ ಮಾಡಲು ಅಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಜೂ. 30 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಎರಡನೇ ಮಹಡಿ, ಅಕ್ಷಯ ಭವನ, ಪಿಎಲ್ ಡಿ ಬ್ಯಾಂಕ್ ಕಟ್ಟಡ ಆವರಣ, ದೇವನಹಳ್ಳಿ ಟೌನ್. ದೂ. ಸಂಖ್ಯೆ: 080-29565103 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ದೇವನಹಳ್ಳಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

admin
the authoradmin

Leave a Reply

Translate to any language you want