LatestMysore

ಕಾಂಗ್ರೆಸ್ ಕಾರ್ಯಕರ್ತರು ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಸಂಕಲ್ಪ ಮಾಡಿ: ರಾಜೇಶ್ ಠಾಕೋರ್

ಕೆ.ಆರ್.ನಗರ(ಸಂಘಟನೆ ಮಂಜುನಾಥ್): ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಕ್ಷ ಸಿದ್ದಾಂತ ಮತ್ತು ಪಕ್ಷ ಅಧಿಕಾರ ಅವಧಿಯಲ್ಲಿ  ಮಾಡಿರುವ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ಸಂಕಲ್ಪ ಮಾಡಬೇಕು ಎಂದು ಎಐಸಿಸಿ ಉಸ್ತುವಾರಿ ರಾಜೇಶ್ ಠಾಕೋರ್  ಹೇಳಿದರು.

ಪಟ್ಟಣದ  ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ಸಂಘಟನಾ ಸೃಜನಾ  ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು  ಕಾಂಗ್ರೆಸ್‌ನ ಸಿದ್ಧಾಂತಗಳಿಗೆ ಸಂಪೂರ್ಣ ಬದ್ದರಾಗಿರಬೇಕು ಎಂದರು.

ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚಿಂತನೆಗಳನ್ನು ತಳಮಟ್ಟದಲ್ಲಿ ಜಾರಿಗೊಳಿಸಿ, ದೇಶದಲ್ಲಿ ಕಾಂಗ್ರೆಸ್ ಪಕ್ಷದ ಪುನರ್ ಸಂಘಟನೆಗೆ ಅಭಿಯಾನ  ಆರಂಭಿಸಲಾಗಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.

ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ ಇದಕ್ಕೆ ಉದಾಹರಣೆ ಭಾನುವಾರ   ಟಿಎಪಿಸಿಎಂಎಸ್ ‌ನ ಆಡಳಿತ ಮಂಡಳಿಯ 12ಸ್ಥಾನಕ್ಕೆ  ನಡೆದ ಚುನಾವಣೆಯಲ್ಲಿ 12 ಮಂದಿ ಅಭ್ಯರ್ಥಿಗಳು ಜಯಗಳಿಸಿರುವುದು ಸಾಕ್ಷಿ ಎಂದರು.

ಕಾಂಗ್ರೆಸ್ ಪಕ್ಷ ಸದೃಢವಾಗಿರುವುದರಿಂದ 2028ಕ್ಕೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಶಾಸಕ ಡಿ.ರವಿಶಂಕರ್ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಯಿಂದ ಸ್ಪರ್ಧಿಸುವಂತವರು ಚಿಂತನೆ ಮಾಡುವ ಅಗತ್ಯವಿದೆ ಎಂದು ಹೇಳಿದ ಅಧ್ಯಕ್ಷರು ರವಿಶಂಕರ್ ಮತ್ತೆ ಆಯ್ಕೆಯಾಗಿ ರಾಜ್ಯ ಸರ್ಕಾರದಲ್ಲಿ ಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಶಾಸಕ ಡಿ.ರವಿಶಂಕರ್, ಎಐಸಿಸಿಯ ಮೈಸೂರು ಜಿಲ್ಲಾ ಉಸ್ತುವಾರಿ ಹೆಚ್.ಸಿ.ಬಸವರಾಜ್, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಕಾರ್ಯದರ್ಶಿ ಶಿವಪ್ರಕಾಶ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್,  ಮಾತನಾಡಿದರು.

ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್, ಜಿ.ಪಂ.ಮಾಜಿ ಸದಸ್ಯರಾದ ಜಿ.ರಾಮೇಗೌಡ, ಮಾರ್ಚಹಳ್ಳಿಶಿವರಾಂ, ತಾ.ಪಂ. ಮಾಜಿ ಅಧ್ಯಕ್ಷರಾದ ಹಾಡ್ಯಮಹದೇವಸ್ವಾಮಿ, ಹೆಚ್.ಟಿ.ಮಂಜುನಾಥ್, ಟಿಎಪಿಸಿಎಂಎಸ್ ನಿರ್ದೇಶಕರಾದ ಎಸ್.ಸಿದ್ದೇಗೌಡ, ಹೆಚ್.ಪಿ.ಪ್ರಶಾಂತ್, ಕಾಂಗ್ರೆಸ್ ನಗರಾಧ್ಯಕ್ಷ ಎಂ.ಜೆ.ರಮೇಶ್, ತಾಲೂಕು ವಕ್ತಾರ ಸೈಯದ್‌ಜಾಬೀರ್, ಮುಖಂಡರಾದ ವೈ.ಎಸ್.ಜಯಂತ್, ಲತಾರವಿ, ರಾಣಿ, ಕೆ.ಪಿ.ಯೋಗೀಶ್, ಶಾಂತಿರಾಜ್, ಪ್ರಭಾಕರ್, ತಿಮ್ಮಶೆಟ್ಟಿ, ಜಲ್ಲಿಮಂಜು, ಸುನೀತ ಮತ್ತಿತರರು ಹಾಜರಿದ್ದರು.

admin
the authoradmin

Leave a Reply