Mysore

ಕೆ.ಆರ್.ನಗರದಲ್ಲಿ ಗಣರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ಶಾಸಕ ಡಿ.ರವಿಶಂಕರ್ ಸೂಚನೆ

????????????????????????????????????

ಕೆ.ಆರ್.ನಗರ(ಜಿಟೆಕ್ ಶಂಕರ್): ಜ.26ರಂದು ಭಾರತದ ಗಣರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲು ಸರ್ವರೂ ಸಹಕಾರ ನೀಡಬೇಕು ಎಂದು ಶಾಸಕ ಡಿ.ರವಿಶಂಕರ್ ಮನವಿ ಮಾಡಿದ್ದಾರೆ.

ಪಟ್ಟಣದ ಆಡಳಿತಸೌಧದ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲ್ಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕೃಷ್ಣರಾಜೇಂದ್ರ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಿಂದ ಪುರಸಭೆ ಬಯಲು ರಂಘ ಮಂದಿರದವರೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎನ್‌ಸಿಸಿ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳ ಪಥ ಚಲನೆ ನಡೆಯಲಿದ್ದು, ಇಲಾಖೆಗಳ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಗೈರಾಗುವವರ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಪ್ರತೀ ವರ್ಷದಂತೆ ಈ ಬಾರಿಯೂ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕು ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಐದು ಮಂದಿ ಸಾಧಕರನ್ನು ಸನ್ಮಾನಿಸುವುದರ ಜತೆಗೆ ಶಾಲಾ ಮಕ್ಕಳಿಂದ ವಿವಿಧ ಸಾಮೂಹಿಕ ಕವಾಯತು ಕಾರ್ಯಕ್ರಮಗಳು ನಡೆಯಲಿವೆ. ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ಪೋಷಕ ವೃಂದ ಮಕ್ಕಳ ಮನರಂಜನಾ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಹಾಜರಿದ್ದು, ವೀಕ್ಷಿಸಿ ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರರಾದ ಜಿ.ಸುರೇಂದ್ರಮೂರ್ತಿ, ರುಕಿಯಾಬೇಗಂ, ತಾ.ಪಂ. ಕಾರ್ಯನಿರ್ವಾಹಕಾಧಿಕಾರಿಗಳಾದ ವಿ.ಪಿ.ಕುಲದೀಪ್, ಎ.ಎನ್.ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಬಿ.ಕುಮಾರಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಕೃಷಿ ಸಹಾಯಕ ನಿರ್ದೇಶಕ ಕೆ.ಜೆ.ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹೆಚ್.ಎಲ್.ಶಂಕರಮೂರ್ತಿ, ಬಿಸಿಎಂ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಕೆ.ಮೇಘನಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಲ್.ವಿನೀತ್, ವಿ.ಸುಮಿತ, ಅಯಾಜ್‌ಪಾಷ, ಅರ್ಕೇಶ್‌ಮೂರ್ತಿ, ಮಧುಸೂದನ್.

ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಮು, ಎಡಿಎಲ್‌ಆರ್ ಶ್ರೀಕಂಠಶರ್ಮ, ಸಿಡಿಪಿಒ ಸಿ.ಎಂ.ಅಣ್ಣಯ್ಯ, ಆರಕ್ಷಕ ಉಪನಿರೀಕ್ಷಕ ಆರ್.ಸ್ವಾಮಿಗೌಡ, ಸಹಾಯಕ ನಿರೀಕ್ಷಕ ಹೆಚ್.ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಆರ್.ಯಶ್ವಂತ್‌ಕುಮಾರ್, ಮುಖಂಡರಾದ ವ್ಯಾನ್‌ಸುರೇಶ್, ನರಸಿಂಹರಾಜು, ಜೆ.ಎಂ.ಕುಮಾರ್, ತಿಮ್ಮಶೆಟ್ಟಿ, ರಾಜಯ್ಯ, ರಾಮಾಚಾರಿ ಹಾಜರಿದ್ದರು.

admin
the authoradmin

ನಿಮ್ಮದೊಂದು ಉತ್ತರ

Translate to any language you want