janamanakannada > Blog > Latest > Mysore > ಡಿ.26 ರಂದು ಐಶ್ವರ್ಯ ಪಬ್ಲಿಕ್ ಕಾಲೇಜಿನಲ್ಲಿ ನೃತ್ಯ ಕಲಾಂಜಲಿ ಮತ್ತು ವಾರ್ಷಿಕೋತ್ಸವ
ಕುಶಾಲನಗರ(ರಘು ಹೆಬ್ಬಾಲೆ): ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಳ್ಳೂರಿನ ಐಶ್ವರ್ಯ ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಡಿ.26 ರಂದು ಅದ್ದೂರಿ ನೃತ್ಯ ಕಲಾಂಜಲಿ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ.

ಅಂದು ಸಂಜೆ 4.30 ಗಂಟೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪುಲಿಯಂಡ ರಾಮ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಉಪ ನಿರ್ದೇಶಕ ಎಂ.ಎಲ್.ಚಿಂದಾನಂದ ಕುಮಾರ್ ಹಾಗೂ ಗೌರವ ಅತಿಥಿಗಳಾಗಿದ್ದಾರೆ.

ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಕಾರ್ಯದರ್ಶಿಯು ಆದ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಎನ್.ಕೆ.ಜ್ಯೋತಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ತಿಳಿಸಿದೆ.

Tags:kushalanagar news
admin








