ಕುಶಾಲನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷರಾಗಿ ಎಂ.ಜೆ.ಇರ್ಫಾನ್ ಅಧಿಕಾರ ಸ್ವೀಕಾರ

ಕುಶಾಲನಗರ (ರಘುಹೆಬ್ಬಾಲೆ): ತಾಲ್ಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷರಾಗಿ ಎಂ.ಜೆ.ಇರ್ಫಾನ್ ಅಧಿಕಾರ ಸ್ವೀಕರಿಸಿದರು. ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಘಟಕದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಪಕ್ಷದ ಬಾವುಟವನ್ನು ಇರ್ಫಾನ್ ಅವರಿಗೆ ನೀಡಿದರು.
ಸಭೆಯಲ್ಲಿ ಮುಂದಿನ ತಿಂಗಳಿನಲ್ಲಿ ನಗರ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಮುಂಬರುವ ಪುರಸಭೆ ಚುನಾವಣೆಯಲ್ಲಿ ಕನಿಷ್ಠ 5 ಮಂದಿ ಅಲ್ಪಸಂಖ್ಯಾತರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು, ಚುನಾವಣೆ ಬಳಿಕ ಇಬ್ಬರನ್ನು ನಾಮನಿರ್ದೇಶನ ಮಾಡಲು ಕೋರಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಅಲ್ಪಸಂಖ್ಯಾತರ ಘಟಕ ಕುಶಾಲನಗರ ಬ್ಪಾಕ್ ಅಧ್ಯಕ್ಷ ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಯೋಜನಾ ಪ್ರಾಧಿಕಾರ ಸದಸ್ಯ ಸಜಿ, ಬ್ಲಾಕ್ ಉಪಾಧ್ಯಕ್ಷ ಶಾಂತಪ್ಪ ಅಂಥೋಣಿ, ಕಾರ್ಯದರ್ಶಿ ಮಜೀದ್, ಜಿಲ್ಲಾ ಸಮಿತಿ ಸದಸ್ಯ ಆಶ್ರಫ್, ಡಿಸಿಸಿ ಸದಸ್ಯ ಶೇಖರ್, ಬೀದಿಬದಿ ವ್ಯಾಪಾರಿ ಘಟಕದ ಅಧ್ಯಕ್ಷ ಆದಂ ಮತ್ತಿತರರು ಪಾಲ್ಗೊಂಡಿದ್ದರು.







