LatestMysore

ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಮೈಸೂರು: ನಗರದ ಹಿಂದೂಸ್ಥಾನ್ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ನಿರೀಕ್ಷಕರಾದ ಪಿ. ಎಂ. ಸಿದ್ದರಾಜು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಮುಖ್ಯ ಅತಿಥಿ  ಪಿ. ಎಂ. ಸಿದ್ದರಾಜು ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಕುರಿತು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಸ್ಮರಿಸಿದರು. ಯುವಜನತೆ ದೇಶದ ಪ್ರಗತಿ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಸಿ.ಜೆ. ಪ್ರಿಯ ಅವರು ಮಾತನಾಡಿ, ವಿದ್ಯಾರ್ಥಿಗಳು ಸ್ವಾತಂತ್ರ್ಯದ ಮೌಲ್ಯವನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ಶಿಕ್ಷಣದೊಂದಿಗೆ ದೇಶಪ್ರೇಮ, ಮಾನವೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

admin
the authoradmin

Leave a Reply