LatestMysore

ಶೇ 90ರಷ್ಟು ಅಂಕ ಪಡೆದ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಅರ್ಜಿ ಸಲ್ಲಿಸಿ

ಕೆ. ಆರ್ ನಗರ(ಸಂಘಟನೆ ಮಂಜುನಾಥ್) : ಕೆಆರ್ ನಗರ ಮತ್ತು ಸಾಲಿಗ್ರಾಮ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶಿವರಾಮ್ ಅವರು 2025/26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತಲೂ ಹೆಚ್ಚು ಅಂಕಗಳಿಸಿದ ಒಕ್ಕಲಿಗ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ.

ಅವರು ಪಟ್ಟಣದಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ಕೂಡ 25/26 ನೇ ಸಾಲಿನಲ್ಲಿ ಶೇಕಡಾ 90 ಕ್ಕಿಂತಲೂ ಹೆಚ್ಚು ಅಂಕಗಳಿಸಿದ ಒಕ್ಕಲಿಗ ಸಮಾಜದ ಮಕ್ಕಳಿಗೆ ಕೆಆರ್ ನಗರ ಮತ್ತು ಸಾಲಿಗ್ರಾಮ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಸಮಾಜದ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು ಅರ್ಜಿ ಸಲ್ಲಿಸಲು ಹೆಚ್ ಡಿ ದೇವೇಗೌಡರ ಸಮುದಾಯ ಭವನ ಕೆಆರ್ ನಗರ ದೂರವಾಣಿ ಸಂಖ್ಯೆ 9448885885 ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಆಡಳಿತ ಮಂಡಳಿಯವರ ಹತ್ತಿರ ಮಾಹಿತಿ ಪಡೆದು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ.

admin
the authoradmin

Leave a Reply