Job NewsLatest

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ತಕ್ಷಣವೇ ಅರ್ಜಿ ಸಲ್ಲಿಸಿ… ಆ.7, ಕಡೆಯ ದಿನ

ಕರ್ನಾಟಕ ಕಂದಾಯ ಇಲಾಖೆಯ ಗ್ರೂಪ್-ಸಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ದಿನಾಂಕವನ್ನು KEA  ಆಗಸ್ಟ್ 7ರವರೆಗೆ ವಿಸ್ತರಿಸಿದೆ. ಈಗಾಗಲೇ  ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸಿದರೆ  ತಕ್ಷಣವೇ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಈ ಹಿಂದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಜುಲೈ 30ಕ್ಕೆ ಅಂತಿಮಗೊಳಿಸಲಾಗಿತ್ತು. ಇದೀಗ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village Administrative Officer – VA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದ್ದು. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಈ ಪ್ರಮುಖ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.08.2026. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10.08.2026. ದಿನಾಂಕ 10.07.2026 ರಂದು ಬಿಡುಗಡೆ ಮಾಡಲಾದ ಮೂಲ ಅಧಿಸೂಚನೆಯಲ್ಲಿನ ಉಲ್ಲೇಖಿತ ಇತರೆ ಯಾವುದೇ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಈ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ cetonline.karnataka.gov.in ಗೆ ಭೇಟಿ ನೀಡಿ.

admin
the authoradmin

Leave a Reply