LatestNewsState

ರಾಷ್ಟ್ರಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಕಂಚಿನ ಪದಕ: ಸ್ವಾಮಿ ಕೆ.ಕೆ. ಅವರಿಗೆ ಸನ್ಮಾನ

ಬೆಂಗಳೂರು: 69ನೇ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಪೊಲೀಸ್ ಫೋಟೋಗ್ರಫಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ (ಮೂರನೇ ಸ್ಥಾನ) ಗಳಿಸಿದ ಸ್ವಾಮಿ ಕೆ.ಕೆ. ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಸನ್ಮಾನಿಸಲಾಯಿತು.

8ನೇ ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರಾದ ಸಲೀಮ್, IPS ಅವರು ಸ್ವಾಮಿ ಕೆ.ಕೆ. ಅವರನ್ನು ಸನ್ಮಾನಿಸಿ, ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಕರ್ನಾಟಕ ಪೊಲೀಸ್ ಇಲಾಖೆಯನ್ನು ಪ್ರತಿನಿಧಿಸಿ 69ನೇ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ ಗಳಿಸಿರುವುದು ಕರ್ನಾಟಕ ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆಯು ಪೊಲೀಸ್ ಇಲಾಖೆಯ ಇತರ ಸಿಬ್ಬಂದಿಗೂ ಪ್ರೇರಣೆಯಾಗಿದೆ. ಸ್ವಾಮಿ ಕೆ.ಕೆ. ಅವರ ಈ ಸಾಧನೆಗೆ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅಭಿನಂದನೆಗಳು ಹಾಗೂ ಶುಭಾಶಯಗಳು

admin
the authoradmin

ನಿಮ್ಮದೊಂದು ಉತ್ತರ