Mysore

ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಪ್ರಚಾರೋಪನ್ಯಾಸ ಕಾರ್ಯಕ್ರಮ…

ಮೈಸೂರು: ಮೈಸೂರಿನ ಹಿಂದೂಸ್ಥಾನ್ ಕಾಲೇಜಿನ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಹಾಗೂ ಹಿಂದೂಸ್ಥಾನ್ ಕಾಲೇಜು, ಜೆ.ಪಿ.ನಗರ, ಮೈಸೂರು. ಕನ್ನಡ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಚಾರೋಪನ್ಯಾಸ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ ಪ್ರಸಾರಾಂಗದ ಗೌರವ ಕಾರ್ಯನಿರ್ವಾಹಕರು, ಸಂಪಾದಕರಾದ ಡಾ. ಕೆ.ಪಿ.ಲಲಿತ ಅವರು ಆಗಮಿಸಿ ಕೊಡಗು ಪರಿಸರದ ಸ್ಥಳನಾಮಗಳು ಎಂಬ ವಿಷಯದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಎಂ.ನಂಜಯ್ಯ ಹೊಂಗನೂರು ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಹಿಂದೂಸ್ಥಾನ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜೆ.ಪ್ರಿಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿದ್ದ ಹಿಂದೂಸ್ಥಾನ್ ಕಾಲೇಜಿನ ಭಾಷಾವಿಭಾಗದ ಮುಖ್ಯಸ್ಥರು ಹಾಗೂ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ.ಶಿವಕುಮಾರ್ ಆರ್ ಅವರು ಕಾರ್ಯಕ್ರಮದ ಮಹತ್ವವನ್ನು ತಿಳಿಸಿಕೊಟ್ಟರು. ಹಿಂದೂಸ್ಥಾನ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಪರಮೇಶ ಕೆ. ಅವರು‌ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿನ್ನಸ್ವಾಮಿ,   ಹೆಚ್ಚುವರಿ ನೋಂದಾಣಿ ಅಧಿಕಾರಿ ಭಗವಾನ್, ಸಲಹಾ ನೋಂದಣಿ ಅಧಿಕಾರಿಗಳಾದ ಸುಬ್ರಹ್ಮಣ್ಯಂ, ಸಾಹಿತ್ಯ ಕಾರ್ಯದರ್ಶಿಯಾದ ಸಂಜನ ಸಿ., ಬೋಧಕರು, ಬೋಧಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೈಸೂರಿನ ಗಂಗೋತ್ರಿ ಪಬ್ಲಿಕ್  ಶಾಲೆಯಲ್ಲಿ ಅದ್ಧೂರಿ ಗಣರಾಜ್ಯೋತ್ಸವ ಆಚರಣೆ   

admin
the authoradmin

ನಿಮ್ಮದೊಂದು ಉತ್ತರ

Translate to any language you want