LatestSports

ಚಿನ್ನದ ಪದಕ ವಿಜೇತರಾದ ಜಮ್ಮಡ ಪ್ರೀತ್ ಅಪ್ಪಯ್ಯರವರಿಗೆ ಅಭಿನಂದನೆಯ ಸನ್ಮಾನ

ಮೈಸೂರು: ಕೆಎಮ್ ಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿನ್ನದ ಪದಕ ವಿಜೇತರಾದ ಕೊಡಗು ಮೂಲದ ಮೈಸೂರು ಬನ್ನಿಮಂಟಪದ ನಿವಾಸಿ, ಮೈಸೂರು ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯ ಜಮ್ಮಡ ಪ್ರೀತ್ ಅಪ್ಪಯ್ಯ ಅವರಿಗೆ ಅಭಿನಂದನಾ ಸಮಾರಂಭವನ್ನು ಜುಲೈ 3ರಂದು ಸಂಜೆ 5.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ

ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ಶೂಟಿಂಗ್ ರೇಂಜ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ವತಿಯಿಂದ ನಡೆದ 14ನೇ ಕರ್ನಾಟಕ ರಾಜ್ಯ ಶೂಟಿಂಗ್ಸ್ ಸ್ಪರ್ಧೆ ಮತ್ತು ಚಾಂಪಿಯನ್ ಶಿಪ್ 206ರಲ್ಲಿ ಜಮ್ಮಡ ಪ್ರೀತ್ ಅಪ್ಪಯ್ಯ ಅವರು ಎರಡು ಚಿನ್ನದ ಪದಕಗಳನ್ನು ಗಳಿಸಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.

ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ  ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಡಾ ಮಾಜಿ ಅಧ್ಯಕ್ಷರಾದ ಎಚ್ ವಿ ರಾಜೀವ್, ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ರವಿಶಂಕರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು, ಹಿರಿಯ ಸಮಾಜ ಸೇವಕರಾದ ರಘುರಾಮ್ ವಾಜಪೇಯಿ, ವಿಶೇಷ ಚೇತನ ಅಂತರಾಷ್ಟ್ರೀಯ ಕ್ರೀಡಾಪಟು ಅಲೋಕ್ ಜೈನ್, ಇನ್ನಿತರರು ಭಾಗವಹಿಸಲಿದ್ದಾರೆ

admin
the authoradmin

Leave a Reply