LatestMysore

ಪುಷ್ಪಾ ಹಿಂದಿ ವಿದ್ಯಾಲಯದ 34ನೇ ವಾರ್ಷಿಕೋತ್ಸವ, ಪದವಿ ಪ್ರದಾನ ಸಮಾರಂಭ

ಮೈಸೂರು: ಪುಷ್ಪಾ ಹಿಂದಿ ವಿದ್ಯಾಲಯದ 34ನೇ ವಾರ್ಷಿಕೋತ್ಸವದ ಅಂಗವಾಗಿ ಪದವಿ ಪ್ರದಾನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಳ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಡಾ. ಪುಷ್ಪಾ ರಚಿಸಿದ ‘ಸಫಲತಾ ಕಾ ಮಂತ್ರ’ (ಹಿಂದಿ) ಹಾಗೂ ‘ಯಶಸ್ಸಿನ ಗುಟ್ಟು’(ಕನ್ನಡ) ಪುಸ್ತಕಗಳನ್ನು ಖ್ಯಾತ ಲೇಖಕ ಹಾಗೂ ವಿಮರ್ಶಕ ಪ್ರೊ.ಸಿ. ನಾಗಣ್ಣ ಮತ್ತು ಮೈಸೂರು ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರತಿಭಾ ಮುದಲಿಯಾರ್ ಅವರಿಂದ ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗುರು ಬಸಪ್ಪ ಹಾಗೂ ಶ್ರೀಮತಿ ಭಾಗ್ಯಲಕ್ಷ್ಮಿ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಿಂದಿ ಪ್ರವೀಣ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ತಮ್ಮ ಭಾಷಣದಲ್ಲಿ ಪ್ರೊ. ಸಿ. ನಾಗಣ್ಣ ಅವರು, ಈ ಪುಸ್ತಕದಲ್ಲಿರುವ ವಿಚಾರಗಳನ್ನು ಓದುವುದಷ್ಟೇ ಸಾಕಾಗುವುದಿಲ್ಲ, ಅದನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು. ಯಶಸ್ಸು ಸಾಧಿಸಲು ಕನಸುಗಳನ್ನು ಕಣ್ಣು ಮುಚ್ಚಿ ನೋಡುವುದಲ್ಲ, ಕಣ್ಣು ತೆರೆದು ನೋಡಿ ಅದನ್ನು ಸಾಕಾರಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಪ್ರೊ. ಪ್ರತಿಭಾ ಮುದಲಿಯಾರ್ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಕನಸುಗಳನ್ನು ಸಾಕಾರಗೊಳಿಸಲು ಪರಿಶ್ರಮ, ಸಂಕಲ್ಪ ಮತ್ತು ದೃಢನಿಶ್ಚಯ ಅಗತ್ಯವೆಂದು ತಿಳಿಸಿದರು.

ಡಾ. ಪುಷ್ಪಾ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಡಾ. ಲಕ್ಷ್ಮಿ ಅವರು ಹಾಗೂ ಹಿಂದೂಸ್ಥಾನ್ ಕಾಲೇಜಿನ ‌ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಪರಮೇಶ ಕೆ.ಉತ್ತನಹಳ್ಳಿ ಅವರು ಸುಸೂತ್ರವಾಗಿ ನಡೆಸಿಕೊಟ್ಟರು.

admin
the authoradmin

Leave a Reply

Translate to any language you want