ಸರಗೂರು(ದಾಸೇಗೌಡ): ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಕುಶಲಕರ್ಮಿಗಳ ಮಹಿಳಾ ವಿಭಾಗದ ಹೆಚ್.ಡಿ.ಕೋಟೆ ತಾಲ್ಲೂಕು ಅಧ್ಯಕ್ಷೆಯಾಗಿ ಶ್ರೀಮತಿ ಶಾಂತಮ್ಮ ಕೋಂ. ಗೋವಿಂದಚಾರ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕುಶಲಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಪ್ರಸನ್ನಕುಮಾರ್ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜೆ.ವಿಜಯಕುಮಾರ್ ಅವರ ಸೂಚನೆಯಂತೆ ಈ ನೇಮಕಾತಿ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕುಶಲಕರ್ಮಿಗಳ ಮಹಿಳಾ ವಿಭಾಗದ ಅಧ್ಯಕ್ಷೆ ಆಶಾ ಕೆಂಪರಾಜು ತಿಳಿಸಿದ್ದಾರೆ.

ಈ ನೇಮಕಾತಿ ಆದೇಶ ಪತ್ರವನ್ನು ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ರವರು ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷೆ ಶಾಂತಮ್ಮ, ಹೆಚ್ ಡಿ ಕೋಟೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಜಾಜ್ ಪಾಶ, ಸರಗೂರು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಮೂರ್ ಬಂದ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸೋಮಣ್ಣ(ಚಲನಚಿತ್ರ ನಟ), ಮಾದಪ್ಪ, ಕೆಂಪರಾಜು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.








