janamanakannada > Blog > Latest > Mysore > ಜೆಎಸ್ಎಸ್ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಷಣ್ಮುಖರವರಿಗೆ ಅಭಿನಂದನೆ ಸಲ್ಲಿಕೆ
ಮೈಸೂರು: ಮೈಸೂರಿನ ಪ್ರತಿಷ್ಠಿತ ಜೆಎಸ್ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಜೆಎಸ್ಎಸ್ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಷಣ್ಮುಖ ಅವರು ಆಯ್ಕೆಯಾಗಿದ್ದು, ಅವರಿಗೆ ಜೆಎಸ್ಎಸ್ ಮಹಾ ವಿದ್ಯಾ ಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಅಭಿನಂದಿಸಲಾಯಿತು.

ಜೆಎಸ್ಎಸ್ ಎರಡನೇ ಹಂತ, ಜೆಎಸ್ಎಸ್ ನಗರದ (ಲಲಿತಾದ್ರಿ ಪುರ) ದಲ್ಲಿರುವ ಷಣ್ಮುಖ ನಿವಾಸದಲ್ಲಿ ಷಣ್ಮುಖ ಅವರ ನಿವಾಸದಲ್ಲಿ ಜೆಎಸ್ಎಸ್ ಮಹಾ ವಿದ್ಯಾ ಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಪರವಾಗಿ ನಿರ್ದೇಶಕರಾದ ಕಲ್ಮಳ್ಳಿ ನಟರಾಜು ಅವರು ನಿವಾಸಕ್ಕೆ ತೆರಳಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಷಣ್ಮುಖರವರ ಧರ್ಮಪತ್ನಿ ಶ್ರೀಮತಿ ಗೀತಾ ಷಣ್ಮುಖ, ಜೆಎಸ್ಎಸ್ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಧುವನಹಳ್ಳಿ ಸಿದ್ದಲಿಂಗ ಸ್ವಾಮಿ ಉಪಸ್ಥಿತರಿದ್ದರು.
Tags:kalmalli nataraj
admin








