ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಮೈಸೂರು ಯುವ ಬಳಗದಕಾರ್ಯಕರ್ತರು ಹೂವಿನ ಸ್ವಾಗತ ನೀಡಿ ಶುಭಾಶಯ ಕೋರಿದ್ದಾರೆ.
ಇಲ್ಲಿನ ನಾರಾಯಣ ಶಾಸ್ತ್ರಿ ರಸ್ತೆಯ ಮಹಾರಾಣಿ ಸರ್ಕಾರಿ ಪ್ರೌಢಶಾಲೆ ಪರೀಕ್ಷೆ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಪೆನ್ ನೀಡಿ ಮೈಸೂರಿಗೆ ಉನ್ನತ ಫಲಿತಾಂಶ ಬರಲೆಂದು ಹಾರೈಸಿದರು.
ನಿಮ್ಮೊಂದಿಗೆ ನಾವಿದ್ದೇವೆಂದು ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ. ಈ ವೇಳೆ ಮಾತನಾಡಿದ ಮೂಡ ಮಾಜಿ ಸದಸ್ಯರಾದ ನವೀನ್ ಕುಮಾರ್ ಅವರು, ಪರೀಕ್ಷೆ ಸಂಭ್ರಮದಿಂದ ಬರೆಯಿರಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಂಭ್ರಮದಿಂದ ಬರೆದರೆ ನಿರೀಕ್ಷೆಗಿಂತಲೂ ಹೆಚ್ಚಿನ ಅಂಕಗಳನ್ನು ಪಡೆಯಬಹುದು ಎಂದು ಧೈರ್ಯ ತುಂಬಿದರು.

ಮೈಸೂರ್ ರಕ್ಷಣಾ ವೇದಿಕೆ ಯುವ ಘಟಕದ ಅಧ್ಯಕ್ಷರಾದ ಗುರುರಾಜ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಪರೀಕ್ಷೆ ಶತ್ರು ಎಂದು ಪರಿಗಣಿಸಿದರೆ ವರ್ಷವಿಡೀ ಕಲಿತ ಪಾಠಗಳೆಲ್ಲ ಮರೆತು ಹೋಗುತ್ತವೆ, ಯಾವುದೇ ಕಾರಣಕ್ಕೂ ಪರೀಕ್ಷೆ ಭೂತ ಎಂದುಕೊಳ್ಳಬೇಡಿ ಹಬ್ಬದ ರೀತಿಯಲ್ಲಿ ಸಂಭ್ರಮಿಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಪೋಷಕರು ತುಂಬಬೇಕು, ಸಂಕುಚಿತ ಮನೋಭಾವದಿಂದ ಸುಮ್ಮನೆ ಕುಳಿತರೆ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ.
ದೊಡ್ಡ ದೊಡ್ಡ ಸಂಶೋಧನೆಗಳು ಹುಟ್ಟಿಕೊಂಡಿದ್ದೇ ಪ್ರಶ್ನೆಗಳಿಂದ ಎನ್ನುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು, ಪರೀಕ್ಷೆ ಒಂದು ಸಂಭ್ರಮ ಎನ್ನುವುದರ ಜೊತೆಗೆ ಆಂತರಿಕವಾಗಿ ನೀವು ಮೊದಲು ಪ್ರಶ್ನೆ ಮಾಡಿಕೊಳ್ಳಿ , ಪರೀಕ್ಷೆ ಎಂಬ ಭಯ, ಒತ್ತಡದಿಂದ ಮೊದಲು ಹೊರ ಬನ್ನಿ. ಇಲ್ಲವಾದಲ್ಲಿ ನೀವು ಕಲಿತ ಎಲ್ಲ ಪಾಠಗಳು ಮರೆತು ಬಿಡಬಹುದು ಎಂತಹ ಕಠಿಣ ಸಂದರ್ಭದಲ್ಲಿಯೂ ನೀವು ಕೀಳರಿಮೆ ಇಟ್ಟುಕೊಳ್ಳಬಾರದು. ಪೋಷಕರು ಕೂಡ ಮಕ್ಕಳ ಮೇಲೆ ನಂಬಿಕೆ ಇಡಬೇಕು ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಪ್ರಮೋದ್ ಗೌಡ, ವಿಕ್ರಂ ಅಯ್ಯಂಗಾರ್, ನವೀನ್, ರವಿಚಂದ್ರ, ಪ್ರಶಾಂತ್, ಸಂತೋಷ್ , ಮಂಜುನಾಥ್, ಶ್ರೀನಿವಾಸ್ ಶೆಟ್ಟಿ , ಹೇಮಂತ್ ಹಾಗೂ ಇನ್ನಿತರರು ಹಾಜರಿದ್ದರು








