LatestPoliticalState

ತುಮಕೂರು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬಿ.ಆರ್ ರೇಖಾ ನೇಮಕ

ತುಮಕೂರು: ಜಿಲ್ಲಾ ಜೆಡಿಎಸ್‌ನ ಮಹಿಳಾ ಘಟಕದ ಅಧ್ಯಕ್ಷರಾಗಿ ಗುಬ್ಬಿ ತಾಲ್ಲೂಕು ಕಡಬ ಹೋಬಳಿ ಬ್ಯಾಡಗೆರೆಯವರಾದ  ಬಿ.ಆರ್. ರೇಖಾ ಅವರನ್ನು ನೇಮಕ ಮಾಡಲಾಗಿದೆ.

ಜೆಡಿಎಸ್ ವರಿಷ್ಠರ ಸೂಚನೆ ಮೇರೆಗೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ನಿಂಗಪ್ಪ, ಪಕ್ಷದ ಮುಖಂಡರ ಅಭಿಪ್ರಾಯ ಪಡೆದು ಜೆಡಿಎಸ್ ಮಹಿಳಾ ಘಟಕ ರಾಜ್ಯಾಧ್ಯಕ್ಷೆ  ರಶ್ಮಿ ರಾಮೇಗೌಡ ಅವರು ರೇಖಾ ಅವರನ್ನು ಜಿಲ್ಲಾ ಘಟಕ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ.

ಹಿರಿಯ ವಕೀಲರಾದ ರೇಖಾ  ಅವರು ಜೆಡಿಎಸ್ ರಾಜ್ಯ ಘಟಕ ಸಂಚಾಲಕರಾಗಿ, ಜಿಲ್ಲಾ ಕಾನೂನು ಘಟಕ ಅಧ್ಯಕ್ಷರಾಗಿ, ಜಿಲ್ಲಾ ವಕ್ತಾರರಾಗಿ ಸೇವೆ ಸಲ್ಲಿಸಿದ್ದರು. ಈಗ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಎಲ್ಲಾ ಸಮುದಾಯದ ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜೆಡಿಎಸ್ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ತಿಳಿಸಿದ್ದಾರೆ.

admin
the authoradmin

Leave a Reply