ಯಳಂದೂರು ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಶ್ರೀ ರೂಪ ಭೇಟಿ

ಯಳಂದೂರು(ನಾಗರಾಜ ವೈ ಕೆ ಮೊಳೆ): ಪಟ್ಟಣ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಶ್ರೀ ರೂಪ ಭೇಟಿ ನೀಡಿ ವಿದ್ಯಾರ್ಥಿನಿಲಯಗಳ ದುರಸ್ತಿ ಕಾಮಗಾರಿ ಪರಿಶೀಲನೆ ನಡೆಸಿದರು.
ಯಳಂದೂರು ಪಟ್ಟಣಕ್ಕೆ ಜಿಲ್ಲಾಧಿಕಾರಿ ಶ್ರೀ ರೂಪ ಭೇಟಿ ನೀಡಿ ಪಟ್ಟಣದಲ್ಲಿ ಇರುವ ಪುರತತ್ವ ಇಲಾಖೆಯ ಮಳೆ ಮಂಟಪವನ್ನು ವೀಕ್ಷಣೆ ಮಾಡಿ ದೇವಾಲಯದ ಅರ್ಚಕರಿಂದ ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಈ ದೇವಾಲಯವು ತನ್ನ ಪ್ರಸಿದ್ಧ ಹೊಂದಿದ್ದು ದೇವಾಲಯಕ್ಕೆ ಅಗತ್ಯವಾದ ಮೂಲಭೂತ ಸೌಲಭ್ಯ ಕಲ್ಪಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಆ ನಂತರ ಪಟ್ಟಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಬಳೆಪೇಟೆ, ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಎರಡು ವಿದ್ಯಾರ್ಥಿ ನಿಲಯಗಳಲ್ಲಿ ನಡೆಯುತ್ತಿರುವ ದುರಸ್ತಿ ಕಾಮಗಾರಿ ಪರಿಶೀಲಿಸಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿರುವ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಮತ್ತುಇಂಜನಿಯರು ರವರಿಗೆ ಸ್ಥಳದಲ್ಲಿ ಸೂಚನೆ ನೀಡಿದರು.
ಇನ್ನೂ ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸ ಕೊಡಬೇಕು ಹಾಗೂ ವಿದ್ಯಾರ್ಥಿ ನಿಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ತಾಲ್ಲೂಕು ಮತ್ತು ಜಿಲ್ಲಾ ಅಧಿಕಾರಿಗಳು ಕಾಲಕಾಲಕ್ಕೆ ನಿಲಯಗಳಿಗೆ ಭೇಟಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಹಾಗೂ ಸರ್ಕಾರದಿಂದ ದೊರಕುವ ಸೌಲಭ್ಯವನ್ನು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಸಬೇಕು ಹಾಗೂ ವಿದ್ಯಾರ್ಥಿನಿಲಯಗಳ ಹಾಜರಾತಿ ಹೆಚ್ಚಳ ಮಾಡುವ ಮೂಲಕ ವಿದ್ಯಾರ್ಥಿ ನಿಲಯವನ್ನು ತಕ್ಷಣವೇ ಪ್ರಾರಂಭಿಸಿ ಮಕ್ಕಳಿಗೆ ಊಟ ಉಪಚಾರ ನೀಡಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಿದರು.

ನಂತರ ಪಟ್ಟಣದ ಇಂದಿರಾ ಕ್ಯಾಂಟೀನ್ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ನೀಡಬೇಕು ಕ್ಯಾಂಟೀನ್ ನಲ್ಲಿ ಶುದ್ಧ ಕುಡಿಯುವ ನೀರಿಲ್ಲದ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಸ್ಥಳದಲ್ಲಿದ್ದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿಗಳಿಗೆ ಇನ್ನೂ ಒಂದು ವಾರದೊಳಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.
ದಿವಾನ್ ಪೂರ್ಣಯ್ಯನವರ ವಸ್ತು ಸಂಗ್ರಹಾಲಯಕ್ಕೆ ಬೇಟಿ ನೀಡಿ ಪರಶೀಲಿಸಿದ ಜಿಲ್ಲಾಧಿಕಾರಿಗಳು ಸಿ ಎಸ್ ಆರ್ ಅನುದಾನದಲ್ಲಿ ವಸ್ತು ಸಂಗ್ರಹಾಲಯವನ್ನು ಅಭಿವೃದ್ದಿ ಪಡಿಸುತ್ತೇವೆ ಎಂದು ತಿಳಿಸಿದರು

ಐತಿಹಾಸಿಕವಾದ ಬಳೇಮಂಟಪ ಮತ್ತು ಆವರಣದಲ್ಲಿರುವ ಶಿವನದೇವಾಲಯದ ಸುತ್ತಮುತ್ತ ಅನೈರ್ಮಲ್ಯ ಹೆಚ್ಚಾಗಿದ್ದು ಇಲ್ಲಿ ಸಾಯಂಕಾಲ ಸಮಯದಲ್ಲಿ ಮಾರಾಟವಾಗುವ ಮಾಂಸಹಾರಖಾಧ್ಯಗಳ ಮಾರಾಟವನ್ನು ನಿಲ್ಲಿಸಬೇಕು ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗೆ ಒತ್ತಾಯ ಮಾಡಿದರು. ಈ ವಿಚಾರವಾಗಿ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ತುರ್ತಾಗಿ ಕ್ರಮಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿಯ ಮುಖ್ಯಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮುನಿರಾಜ್, ಸಮಾಜ ಯಳಂದೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೇಶವಮೂರ್ತಿ, ನಿರ್ಮಿತಿ ಕೇಂದ್ರ ವ್ಯವಸ್ಥಾಪಕ ನಿರ್ದೇಶಕರಾದ ರಮೇಶ್, ಇಂಜಿನಿಯರ್ ನಂದೀಶ್, ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಟ್ಟಣ ಪಂಚಾಯಿತಿ ಇಂಜಿನಿಯರ್ ವೈ ಎಂ ನಾಗೇಂದ್ರ, ಪಟ್ಟಣ ಪಂಚಾಯತಿ ಆರೋಗ್ಯ ನಿರೀಕ್ಷಕ ರಾಘವೇಂದ್ರ, ಹಾಗೂ ವಿದ್ಯಾರ್ಥಿ ನಿಲಯದ ನಿಲಯ ಪಾಲಕರು, ಪಟ್ಟಣ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು.







