Videos

ರಾಜ್ಯದ ಅತ್ಯಂತ ಎತ್ತರದ ಬೆಟ್ಟಗಳಲ್ಲಿ ಮೂರನೇ ಬೆಟ್ಟವಾಗಿರುವ ಹಿಮವದ್‌ಗೋಪಾಲಸ್ವಾಮಿ ಬೆಟ್ಟ

ರಾಜ್ಯದ ಅತ್ಯಂತ ಎತ್ತರದ ಬೆಟ್ಟಗಳಲ್ಲಿ ಮೂರನೇ ಬೆಟ್ಟವಾಗಿರುವ ಹಿಮವದ್‌ಗೋಪಾಲಸ್ವಾಮಿ ಬೆಟ್ಟ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿದೆ. ಸುಮಾರು 1450 ಅಡಿ ಎತ್ತರದ ಈ ಬೆಟ್ಟದಲ್ಲಿ  ಶ್ರೀ ಗೋಪಾಲಸ್ವಾಮಿ ನೆಲೆನಿಂತಿದ್ದು, ಸುಂದರ ದೇಗುಲದೊಂದಿಗೆ  ಆಸ್ತಿಕರು-ನಾಸ್ತಿಕರನ್ನೆದೆ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ.

ಚಾರಣ ಪ್ರಿಯರಿಗೆ ಹುರುಪಿನ ತಾಣವಾಗಿಯೂ, ನಿಸರ್ಗ ಪ್ರೇಮಿಗಳಿಗೆ ಮುದ ನೀಡುವ, ಭಕ್ತರಿಗೆ ಇಷ್ಟಾರ್ಥ ನೆರವೇರಿಸುವ ಕ್ಷೇತ್ರವಾಗಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಗಮನಸೆಳೆಯುತ್ತಿದೆ. ನೋಡುನೋಡುತ್ತಲೇ ಹಿಮದಿಂದ ಆವೃತವಾಗುತ್ತಾ ರವಿಕಿರಣದಲ್ಲಿ ತನ್ನ ಸ್ನಿಗ್ಧ ಸೌಂದರ್ಯವನ್ನು ತೆರೆದಿಡುವುದು ಈ ಬೆಟ್ಟದ ಮತ್ತೊಂದು ವಿಶೇಷತೆ. ಹೀಗಾಗಿಯೇ ಇಲ್ಲಿಗೆ ದೇಶ-ವಿದೇಶಗಳ ಸಾವಿರಾರು ಪ್ರವಾಸಿಗರು ಆಗಾಗ್ಗೆ ಭೇಟಿ ನೀಡುತ್ತಾರೆ.

ಸದಾ ಒತ್ತಡಗಳಿಂದ, ಪೇಟೆ, ಪಟ್ಟಣಗಳ ಗೌಜುಗದ್ದಲಗಳಲ್ಲಿ ಬದುಕು ಕಟ್ಟಿಕೊಂಡವರು ತಮ್ಮ ವಾರದ ರಜಾ ದಿನಗಳನ್ನು ಕಳೆಯಲು ಇಲ್ಲಿಗೆ ಬಂದರೆ, ಪ್ರೇಮಿಗಳು ಏಕಾಂತ ಬಯಸಿ ಬರುತ್ತಾರೆ. ಹಾಗೆ ಬಂದವರು ದಟ್ಟ್ಟ ಅರಣ್ಯ ನಡುವೆ ಹಿಮದಿಂದ ಆವೃತವಾದ ಬೆಟ್ಟದ ರಮಣೀಯ ನೋಟವನ್ನು ನೋಡುತ್ತಾ ಮೈಮರೆಯುತ್ತಾರೆ. ಇನ್ನು ಅತಿ ಎತ್ತರದ ವಿಶಾಲ ಪ್ರದೇಶವನ್ನು ಹೊಂದಿ ತಂಗಾಳಿಯೊಂದಿಗೆ ಮುಂಜಾನೆ ಹಾಗೂ ಸಂಜೆ ಸದಾ ಹಿಮದಿಂದ ಆವೃತವಾಗುವುದರಿಂದ ಹಾಗೂ ಇಲ್ಲಿ ಗೋಪಾಲಸ್ವಾಮಿ ನೆಲೆ ನಿಂತಿದ್ದರಿಂದ ಒಟ್ಟಾಗಿ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಎಂಬ ಹೆಸರು ಬಂದಿರುವುದಾಗಿ ಹೇಳಲಾಗುತ್ತಿದೆ.

ನಿಸರ್ಗದ ಸೋಜಿಗ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟ… ಇದು ಪುರಾಣದ ಗೋವರ್ಧನಗಿರಿಯಾ?.. ಇದು ಎಲ್ಲಿದೆ? ಇದರ ಇತಿಹಾಸವೇನು?

admin
the authoradmin

Leave a Reply